ನಮ್ ಪಾಲಿಟಿಕ್ಸ್ (@nampolitics) profile picture
Joined December 2023
Photo by ನಮ್ ಪಾಲಿಟಿಕ್ಸ್ (@nampolitics)Photo by ನಮ್ ಪಾಲಿಟಿಕ್ಸ್ (@nampolitics)Photo by ನಮ್ ಪಾಲಿಟಿಕ್ಸ್ (@nampolitics)Photo by ನಮ್ ಪಾಲಿಟಿಕ್ಸ್ (@nampolitics)Photo by ನಮ್ ಪಾಲಿಟಿಕ್ಸ್ (@nampolitics)Photo by ನಮ್ ಪಾಲಿಟಿಕ್ಸ್ (@nampolitics)Photo by ನಮ್ ಪಾಲಿಟಿಕ್ಸ್ (@nampolitics)Photo by ನಮ್ ಪಾಲಿಟಿಕ್ಸ್ (@nampolitics)Photo by ನಮ್ ಪಾಲಿಟಿಕ್ಸ್ (@nampolitics)Photo by ನಮ್ ಪಾಲಿಟಿಕ್ಸ್ (@nampolitics)
ಬೆಂಗಳೂರು ಶಿಕ್ಷಕರ ಕ್ಷೇತ್ರದ ವಿಧಾನಪರಿಷತ್ ಚುನಾವಣೆಯಲ್ಲಿ ಸತತ 5 ಬಾರಿ ಗೆದ್ದಿದ್ದ ಕಾಂಗ್ರೆಸ್ ಅಭ್ಯರ್ಥಿ ಪುಟ್ಟಣ್ಣ ಅವರಿಗೆ ಸೋಲಾಗಿದ್ದು, ಎನ್‌ಡಿಎ ಮೈತ್ರಿಕೂಟದ ಅಭ್ಯರ್ಥಿ ಎ.ಪಿ. ರಂಗನಾಥ್ 908 ಮತಗಳ ಅಂತರದಿಂದ ಜಯಗಳಿಸಿದ್ದಾರೆ.
1
14
ಪ್ರಚಂಡ ಗೆಲುವು ದಾಖಲಿಸಿದ NDA ಮೈತ್ರಿಕೂಟದ ಅಭ್ಯರ್ಥಿ ವಿಜಯಕ್ಕೆ ಬಿಜೆಪಿ-ಜೆಡಿಎಸ್​​ ಸಂತಸ ವ್ಯಕ್ತಪಡಿಸಿದೆ. #Nampolitics
3
ಎನ್‌ಡಿಆರ್‌ಎಫ್‌ ಅಡಿಯಲ್ಲಿ ಕರ್ನಾಟಕ ರಾಜ್ಯಕ್ಕೆ ₹20,585.73 ಕೋಟಿ ಪರಿಹಾರವನ್ನು ತುರ್ತಾಗಿ ಮಂಜೂರು ಮಾಡಿ ಬಿಡುಗಡೆ ಮಾಡುವಂತೆ ಕೋರಿ ಪಿಎಂ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಹಾಗೂ ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಅವರಿಗೆ ಡಿಸಿಎಂ ಡಾ.ಜಿ. ಪರಮೇಶ್ವರ ಪತ್ರ ಬರೆದಿದ್ದಾರೆ. #Nampolitics
3
ರೋಗಿಗಳಿಗೆ ಆಸ್ಪತ್ರೆ ಬಿಲ್​​ ಕಂಡರೆ ಒಂದು ರೀತಿ ನಡುಕ. ಹೀಗಿರುವಾಗ ಚಿಕಿತ್ಸೆ ವೆಚ್ಚದ ಜೊತೆಗೆ ಔಷಧ, ವೈದ್ಯಕೀಯ ಉಪಕರಣಗಳ ಹೆಸರಿನಲ್ಲಿ ಎಷ್ಟು ಹಣ ವಸೂಲಿ ಮಾಡಲಾಗುತ್ತಿದೆ ಎನ್ನುವುದು ಅನೇಕರಿಗೆ ಗೊತ್ತಾಗುವುದಿಲ್ಲ. ಔಷಧಗಳನ್ನ ಆಸ್ಪತ್ರೆಗಳು ಎಷ್ಟು ಬೆಲೆಗೆ ಖರೀದಿಸುತ್ತವೆ, ಅದನ್ನ ರೋಗಿಗಳಿಗೆ ಎಷ್ಟು ಬೆಲೆಗೆ ಮಾರಾಟ
1
5
ಮಾಡಲಾಗುತ್ತದೆ ಎಂಬ ಮಾಹಿತಿ ಇನ್ಮುಂದೆ ಬಿಲ್​​ನಲ್ಲೇ ಮಾಹಿತಿ ಸಿಗಲಿದೆ. ಆರೋಗ್ಯ ಇಲಾಖೆ ಈ ಮಹತ್ವದ ಕ್ರಮಕ್ಕೆ ಮುಂದಾಗಿದೆ. ನವೆಂಬರ್ 1ರಿಂದ ಕರ್ನಾಟಕದ ಎಲ್ಲಾ ಖಾಸಗಿ ಆಸ್ಪತ್ರೆಗಳಲ್ಲಿ ಈ ನಿಯಮ ಜಾರಿಗೆ ಬರಲಿದೆ. ಆ ಮೂಲಕ ಆಸ್ಪತ್ರೆಗಳ ಕಳ್ಳಾಟಕ್ಕೂ ಬ್ರೇಕ್ ಬೀಳಲಿದೆ. #Nampolitics #medicine
2
ಕರ್ನಾಟಕ ಪ್ರದೇಶ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಸೌಮ್ಯಾ ರೆಡ್ಡಿ ಅವರು ಸಂಪುಟದಲ್ಲಿ ಮಹಿಳಾ ಸಚಿವರಿಗೆ ಸ್ಥಾನಮಾನವಿಲ್ಲದ ಕಾರಣ ರಾಜೀನಾಮೆ ನೀಡಿದ್ದಾರೆ. ಎಐಸಿಸಿ ಅಧ್ಯಕ್ಷರಿಗೆ ಆಗಸ್ಟ್ 20ರಂದು ಪತ್ರ ಬರೆದಿದ್ದ ಈ ನಿರ್ಧಾರ ಈಗ ಬಹಿರಂಗವಾಗಿದೆ. ಕಾಂಗ್ರೆಸ್ ವಲಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ.
1
4
ಪಕ್ಷಕ್ಕೆ ನಿಷ್ಠರಾಗಿ ಮುಂದುವರಿಯುವುದಾಗಿ ಸ್ಪಷ್ಟಪಡಿಸಿದ್ದು, ಭವಿಷ್ಯದ ಚುನಾವಣೆಗಳಲ್ಲಿ ಪಕ್ಷದ ಗೆಲುವಿಗೆ ಶ್ರಮಿಸುವುದಾಗಿ ತಿಳಿಸಿದ್ದಾರೆ. #Nampolitics #sowmyareddy
3
ಕೆಪಿಎಸ್‌ಸಿ ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣದ ತನಿಖೆಗೆ ಕರ್ನಾಟಕ ಹೈಕೋರ್ಟ್ ಆದೇಶಿಸಿದ್ದ ಎಸ್‌ಐಟಿ ರಚನೆಯನ್ನು ಪ್ರಶ್ನಿಸಿ ರಾಜ್ಯ ಸರ್ಕಾರ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದು, ಇಂದು (ಅಕ್ಟೋಬರ್ 13) ಸುಪ್ರೀಂಕೋರ್ಟ್​​ನಲ್ಲಿ ಮೇಲ್ಮನವಿ ಅರ್ಜಿ ವಿಚಾರಣೆ ನಡೆಯಿತು. ಈ ವೇಳೆ ಸರ್ಕಾರ ಹಾಗೂ
1
4
ಅಭ್ಯರ್ಥಿಗಳ ಪರ ವಕೀಲರು ವಾದ ಪ್ರತಿವಾದ ಆಲಿಸಿದ ಸುಪ್ರೀಂ, ಎಡಿಜಿಪಿ ದರ್ಜೆಯ ಇಬ್ಬರು ಅಧಿಕಾರಿಗಳ ನೇಮಕಕ್ಕೆ ಡಿಜಿಐಜಿಗೆ ಸೂಚನೆ ನೀಡಿದೆ. #Nampolitics
2
ರಾಜ್ಯದ ರೈಲ್ವೆ ಕ್ಷೇತ್ರದ ಸಮಗ್ರ ವಿಕಾಸ ಹಾಗೂ ಕರಾವಳಿ-ಮಲೆನಾಡು ಭಾಗದ ಸಂಪರ್ಕವನ್ನು ಮತ್ತಷ್ಟು ಕವಲುಗೊಳಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಐತಿಹಾಸಿಕ ನಿರ್ಧಾರ ಕೈಗೊಂಡಿದೆ. ಕೊಂಕಣ ರೈಲ್ವೆಯ ಮುಂದುವರಿದ ಅಭಿವೃದ್ಧಿ ಕಾಮಗಾರಿಗಳು ಹಾಗೂ ರಾಜ್ಯದ ಇತರ ರೈಲ್ವೆ ಯೋಜನೆಗಳ ಪ್ರಗತಿಗಾಗಿ ಬರೋಬ್ಬರಿ 9,000 ಕೋಟಿ ರೂಪಾಯಿ
1
4
ಅನುದಾನವನ್ನು ಮಂಜೂರು ಮಾಡಲಾಗಿದೆ ಎಂದು ರೈಲ್ವೆ ಮತ್ತು ಜಲಶಕ್ತಿ ರಾಜ್ಯ ಸಚಿವ ವಿ. ಸೋಮಣ್ಣ ತಿಳಿಸಿದ್ದಾರೆ. #Nampolitics #vsomanna #railwayminister #train
3
ವಿಧಾನಸಭೆ ಚುನಾವಣೆ ಘೋಷಣೆಯಾದರೆ ಡಿಕೆ ಶಿವಕುಮಾರ್‌ ಸಂಪುಟದ ಸಚಿವರೂ ಸೇರಿ 20 ರಿಂದ 25 ಜನ ಶಾಸಕರು ಬಿಜೆಪಿ ಸೇರಲು ರೆಡಿ ಇದ್ದಾರೆ ಎಂದು ವಿಜಯೇಂದ್ರ ಹೊಸ ಬಾಂಬ್ ಸಿಡಿಸಿದ್ದಾರೆ. ಬೆಂಗಳೂರಿನಲ್ಲಿ ಮಾತಾಡಿದ ವಿಜಯೇಂದ್ರ, ನಾವು ಯಾರನ್ನೂ ಸೆಳೆಯುತ್ತಿಲ್ಲ. ಆದ್ರೆ ನಾಳೆಯೇ ಚುನಾವಣೆ ಘೋಷಣೆಯಾದರೆ
1
13
25 ಜನ ಕಾಂಗ್ರೆಸ್ ಶಾಸಕರು ಬಿಜೆಪಿ ಸೇರುತ್ತಾರೆ. ಅದೂ ಸಚಿವರನ್ನ ಒಳಗೊಂಡು. ಅಂಥ ವಾತಾವರಣ ಈಗ ಇದೆ. ಡಿಕೆ ಶಿವಕುಮಾರ್ ಕಾಂಗ್ರೆಸ್ ನಲ್ಲಿ ನಂಬಿಕೆ ಕಳೆದುಕೊಂಡಿದ್ದಾರೆ. ಆಡಳಿತ ಪಕ್ಷದಲ್ಲೇ ಸಿಎಂ ಮೇಲೆ ವಿಶ್ವಾಸ ಹೋಗಿದೆ ಎಂದು ಹೇಳಿದ್ದಾರೆ. #Nampolitics #vijendra #congress #bjp
7
ಬರೋಬ್ಬರಿ ಐದು ವರ್ಷಗಳ ಬಳಿಕ ಕರ್ನಾಟಕದ ರಾಜ್ಯಪಾಲರನ್ನು ಬದಲಾವಣೆ ಮಾಡಲಾಗಿದೆ. 2021ರಲ್ಲಿ ಕರ್ನಾಟಕದ ರಾಜ್ಯಪಾಲರಾಗಿದ್ದ ಥಾವರ್ ಚಂದ್ ಗೆಹ್ಲೋಟ್ ಅವರ ಸ್ಥಾನಕ್ಕೆ ಡಾ. ಸುಧಾ ಯಾದವ್ ಅವರನ್ನು ನೇಮಿಸಿ ರಾಷ್ಟ್ರಪತಿ ದ್ರೌಪದಿ ಮುರ್ಮು ಆದೇಶ ಹೊರಡಿಸಿದ್ದಾರೆ. #Nampolitics #drsudhayadav
10
ನನಗೆ ಮೇಲ್ಜಾತಿಯವರ ವೋಟುಗಳು ಬೇಡ. ನನಗೆ ದಲಿತರು. ಮುಸ್ಮಿಮರ ವೋಟುಗಳು ಸಾಕು ಅಷ್ಟೆ. ನಾನು ದಲಿತರ ಪರ ಇದ್ದೀನಿ ಅಂತ ಅಂದುಕೊಳ್ಳಲಿ ಬಿಡಿ’ ಎಂದು ಚಿಕ್ಕಬಳ್ಳಾಪುರ ಕ್ಷೇತ್ರದ ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್​​​ ಅವರದ್ದು ಎನ್ನಲಾದ​ ಭಾಷಣದ ವಿಡಿಯೋ ಇದೀಗ ವೈರಲ್ ಆಗಿದೆ. #Nampolitics #pradeepeshwar
1
11
ಸುಪ್ರೀಂ ಕೋರ್ಟ್ ಆದೇಶದ ಹಿನ್ನೆಲೆಯಲ್ಲಿ ಚಾಮರಾಜನಗರದ ಬಂಡೀಪುರ ಮತ್ತು ಕೆ. ಗುಡಿ ವನ್ಯಜೀವಿ ಸಫಾರಿಗಳಲ್ಲಿ ಪ್ರವಾಸಿಗರು ಹಾಗೂ ಸಿಬ್ಬಂದಿ ಮೊಬೈಲ್ ಫೋನ್ ಬಳಸುವುದನ್ನು ಅರಣ್ಯ ಇಲಾಖೆ ಸಂಪೂರ್ಣವಾಗಿ ನಿಷೇಧಿಸಿದೆ. ತುರ್ತು ಸಂಪರ್ಕಕ್ಕಾಗಿ ವಾಹನಗಳಲ್ಲಿ ನಿಸ್ತಂತು ವ್ಯವಸ್ಥೆ ಕಡ್ಡಾಯಗೊಳಿಸಲಾಗಿದೆ. ಜಿಲ್ಲೆಯ ಬಂಡೀಪುರ,
1
4
ಕೆ.ಗುಡಿ ಹಾಗೂ ಪಿ.ಜಿ.ಪಾಳ್ಯ ಸಫಾರಿಗಳಲ್ಲಿ ಈ ನಿಯಮ ಕಟ್ಟುನಿಟ್ಟಾಗಿ ಜಾರಿಯಾಗಿದೆ. #Nampolitics #forestdepartment #mobileban
1
ಗೃಹಲಕ್ಷ್ಮಿ ಯೋಜನೆ (Gruhalakshmi Scheme) ಫಲಾನುಭವಿಗಳಿಗೆ ಬಿಗ್ ಶಾಕ್ ಎದುರಾಗಿದೆ. ಅರ್ಜಿಯಲ್ಲಿ ಹೊಸ ನಿಯಮ ಸೇರ್ಪಡೆ ಮಾಡಲಾಗಿದೆ. ಚುನಾವಣೆ ಮಾದರಿ ನೀತಿ ಸಂಹಿತೆ ಮುಗಿದ ಬಳಿಕ ಸರ್ವೆ ಆರಂಭ ಆಗುವ ಸಾಧ್ಯತೆ ಇದೆ. ಗೃಹಲಕ್ಷ್ಮಿ ಯೋಜನೆಯ ಮರುಪರಿಶೀಲನಾ ಅರ್ಜಿಯಲ್ಲಿ ಹಲವು ಹೊಸ ಪ್ರಶ್ನೆಗಳ ಸೇರ್ಪಡೆ ಮಾಡಲಾಗಿದೆ.
1
11
SIR ಮಾದರಿಯಲ್ಲೇ ಗೃಹಲಕ್ಷ್ಮಿ ಮರು ಪರಿಶೀಲನಾ ಅರ್ಜಿ ಇದ್ದು, ಆ್ಯಪ್‌ನಲ್ಲಿ ಸರ್ವೆ ಆದರೂ ಕೂಡ ಆಫ್‌ಲೈನ್ ಮರುಪರಿಶೀಲನಾ ಅರ್ಜಿ ಭರ್ತಿ ಮಾಡಲೇಬೇಕು. ಬ್ಯಾಂಕ್ ಖಾತೆ, ಆಧಾರ್ ಜೋಡಣೆ , ಪಡಿತರ ಚೀಟಿ ಸಂಖ್ಯೆ ಸಂಬಂಧ ಹಲವು ಪ್ರಶ್ನೆ ಸೇರ್ಪಡೆ ಮಾಡಲಾಗಿದೆ. #Nampolitics #cmdkshivakumar #DKShivakumar #gruhalakshmi
6
ಕರ್ನಾಟಕದ ಹೊಸ ಮದ್ಯ ತೆರಿಗೆ ನೀತಿಯಿಂದ ಬಿಯರ್ ಮಾರಾಟ ಹೆಚ್ಚಿದ್ದರೂ, ಸರ್ಕಾರದ ಆದಾಯಕ್ಕೆ ಪ್ರಮುಖ ಕೊಡುಗೆ ನೀಡುತ್ತಿರುವ ಐಎಂಎಲ್ ಮದ್ಯದ ಮೇಲೆ ತೆರಿಗೆ ಹೊರೆ ಹೆಚ್ಚಾಗಿದೆ. ಹೀಗಾಗಿ ತೆರಿಗೆ ನೀತಿ ಮರುಪರಿಶೀಲಿಸುವಂತೆ ಉದ್ಯಮ ಸಂಘಟನೆಗಳು ಒತ್ತಾಯಿಸಿವೆ. ತಯಾರಕರು ಈ ಹೆಚ್ಚುವರಿ ವೆಚ್ಚವನ್ನು ಗ್ರಾಹಕರಿಗೆ ವರ್ಗಾಯಿಸಿದರೆ,
1
2
ಅದೇ ಪ್ರಮಾಣದ ಮದ್ಯ ಖರೀದಿಸಲು ಗ್ರಾಹಕರು ಹೆಚ್ಚಿನ ಹಣ ಪಾವತಿಸಬೇಕಾಗುತ್ತದೆ ಎಂದಿವೆ. #Nampolitics